MANGALORE- ಮಹಿಳೆ ಜತೆ ಅಸಭ್ಯ ವರ್ತನೆ: ಅಪರಾಧಿ ಮುಸ್ತಾಫ ನಿಗೆ 4 ತಿಂಗಳ ಶಿಕ್ಷೆ, ದಂಡ
Tuesday, July 11, 2023
ಮಂಗಳೂರು: ಮಹಿಳೆಯ ಜತೆ ಅಶ್ಲೀಲ ವರ್ತನೆ ಪ್ರಕರಣದಲ್ಲಿ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ನಾಲ್ಕು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ 2500 ದಂಡ ವಿಧಿಸಿ ತೀರ್ಪು ನೀಡಲಾಗಿದೆ.
ತಲಪಾಡಿಯ ಮೊಹಮ್ಮದ್ ಮುಸ್ತಾಫ ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್ ಮುಸ್ತಾಫ 2017ರ ಜೂ.29 ರಂದು ಸಂಜೆ ಮಂಗಳೂರು ನಗರದ ಲೇಡಿಹಿಲ್ ಬಳಿ ಬಸ್ ನಿಲ್ದಾಣ ಸಮೀಪದ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶದಿಂದ ಅಶ್ಲೀಲವಾಗಿ ವರ್ತಿಸಿದ್ದ ಬಗ್ಗೆ ಪ್ರಕರಣವೊಂದು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧಿಶರಾದ ತಾರಾ ಕೆ.ಸಿ. ಅವರು ಸಮಗ್ರ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 2,500 ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ನೇತ್ರಾವತಿ ವಾದ ಮಂಡಿಸಿದ್ದಾರೆ. ASI ಐತಪ್ಪ ಪ್ರಕರಣ ದಾಖಲಿಸಿದ್ದರು. PSI ಕೃಷ್ಣಾಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.