-->
Mangalore- ಪಿಸ್ತೂಲ್ ಹಿಡಿದುಕೊಂಡು ಬಜಪೆಯಲ್ಲಿ ತಿರುಗಾಟ-  ಕೇರಳದ ಇಬ್ಬರು CCB ಬಲೆಗೆ

Mangalore- ಪಿಸ್ತೂಲ್ ಹಿಡಿದುಕೊಂಡು ಬಜಪೆಯಲ್ಲಿ ತಿರುಗಾಟ- ಕೇರಳದ ಇಬ್ಬರು CCB ಬಲೆಗೆ

 

ಮಂಗಳೂರು: ಅಕ್ರಮ ವಾಗಿ ಪಿಸ್ತೂಲ್ ನ್ನು ಹಿಡಿದುಕೊಂಡು ಬಜಪೆಯಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು  ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.


ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಮತ್ತು
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61)  ಬಂಧಿತರು.

 ಈ ಇಬ್ಬರು ಆರೋಪಿಗಳು   ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ   ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು  CCB ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ  ಇಬ್ಬರನ್ನು ಬಂಧಿಸಿ  ಅವರಿಂದ 1 ಪಿಸ್ತೂಲ್, 2 ಮೊಬೈಲ್ ಫೋನುಗಳು, ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ.  ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,000/- ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

          ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

          ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ   ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

Ads on article

Advertise in articles 1

advertising articles 2

Advertise under the article