ನಾಲ್ಕೂವರೆ ವರ್ಷಗಳಲ್ಲಿ ಪ್ರಚಾರಕ್ಕೆ 3064 ಕೋಟಿ ರೂ. ವ್ಯಯಿಸಿದ ಮೋದಿ ಸರ್ಕಾರ
ನಾಲ್ಕೂವರೆ ವರ್ಷಗಳಲ್ಲಿ ಪ್ರಚಾರಕ್ಕೆ 3064 ಕೋಟಿ ರೂ. ವ್ಯಯಿಸಿದ ಮೋದಿ ಸರ್ಕಾರ
ಕಳೆದ ಐದು ವರ್ಷಗಳಲ್ಲಿ ಪ್ರಚಾರಕ್ಕೆ 3064 ಕೋಟಿ ರೂ.ಗಳನ್ನು ನರೇಂದ್ರ ಮೋದಿ ಸರ್ಕಾರ ಖರ್ಚು ಮಾಡಿದೆ. ಇದು ಸ್ವತಃ ಸರ್ಕಾರವೇ ನೀಡಿದ ಅಧಿಕೃತ ಮಾಹಿತಿ.
ತನ್ನ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಚಾರಕ್ಕಾಗಿ 2018-19ರಿಂದ 2023ರ ಜುಲೈ ವರೆಗೆ ಇಷ್ಟೊಂದು ಭಾರೀ ಪ್ರಮಾಣದ ಹಣವನ್ನು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡಲಾಗಿದೆ.
ಒಟ್ಟು ವೆಚ್ಚಗಳಲ್ಲಿ ಮುದ್ರಣ ಮಾಧ್ಯಮಗಳ ಜಾಹೀರಾತಿಗೆ ಹೆಚ್ಚು ಹಣ ವ್ಯಯಿಸಲಾಗಿದೆ. ಐದು ವರ್ಷಗಳಲ್ಲಿ ಮುದ್ರಣ ಮಾಧ್ಯಮಕ್ಕೆ 1338 ಕೋಟಿ ರೂ.ಗಳನ್ನು ವ್ಯಯಿಸಲಾಗಿದ್ದರೆ, ವಿದ್ಯುನ್ಮಾನ ಮಾಧ್ಯಮಕ್ಕೆ 1273 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಬಹಿರಂಗ ಪ್ರಚಾರಕ್ಕೆ 452 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.
2018-19 ಮತ್ತು 2019-20ನೇ ಸಾಲಿನಲ್ಲಿ ವಿದ್ಯುನ್ಮಾನ ಮಾಧ್ಯಮಗಳ ಜಾಹೀರಾತುಗಳಿಗೆ ಸರ್ಕಾರ ಹೆಚ್ಚು ಖರ್ಚು ಮಾಡಿತ್ತು. ಬಳಿಕ ಮೂರು ಆರ್ಥಿಕ ವರ್ಷಗಳಲ್ಲಿ ವಿದ್ಯುನ್ಮಾನ ಮಾಧ್ಯಮಗಳ ಜಾಹೀರಾತು ವೆಚ್ಚದ ಪಾಲಿನಲ್ಲಿ ಇಳಿಕೆ ಕಂಡುಬಂದಿದೆ.
2018-19 ಸಾಲಿನಲ್ಲಿ ಬಹಿರಂಗ ಪ್ರಚಾರಕ್ಕೆ ಸರ್ಕಾರವು 235 ಕೋಟಿ ರೂ.ಗಳನ್ನು ಖರ್ಚು ಮಾಡಿತ್ತು. ನಂತರದ ವರ್ಷಗಳಲ್ಲಿ ಬಹಿರಂಗ ಪ್ರಚಾರಕ್ಕೆ ಖರ್ಚು ಮಾಡಿದ ಹಣದಲ್ಲಿ ಇಳಿಕೆ ಕಂಡುಬಂದಿದೆ.