
ಒಂದು ಸಾವಿರ PSI ಹುದ್ದೆ ಸೇರಿದಂತೆ 2.50 ಲಕ್ಷ ಸರ್ಕಾರಿ ಹುದ್ದೆಗಳು ಶೀಘ್ರವೇ ಭರ್ತಿ!
ಒಂದು ಸಾವಿರ PSI ಹುದ್ದೆ ಸೇರಿದಂತೆ 2.50 ಲಕ್ಷ ಸರ್ಕಾರಿ ಹುದ್ದೆಗಳು ಶೀಘ್ರವೇ ಭರ್ತಿ!
ರಾಜ್ಯದಲ್ಲಿ ಖಾಲಿ ಇರುವ ಒಂದು ಸಾವಿರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದರ ಜೊತೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇ ರುವ 2.50 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ.
ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ವಿಷಯ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ ಪ್ರಣಾಳಿಕೆಯಂತೆ ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ ಎಂದು ಅವರು ತಿಳಿಸಿದರು.
ಇದರ ಜೊತೆಗೆ ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಮಾನಸಿಕವಾಗಿ ಇದರಿಂದ ಅವರಿಗೆ ಭಾರೀ ದೊಡ್ಡ ಅನುಕೂಲವಿದೆ ಎಂದು ತಿಳಿಸಿದರು.
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಪೊಲೀಸರಿಗೆ ಹೆಚ್ಚುವರಿ ಭತ್ಯೆ ನೀಡುವುದರ ಬಗ್ಗೆಯೂ ಗೃಹ ಸಚಿವಾಲಯ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.