ಸಹೋದರಿಯ ಸಹಕಾರದಿಂದ ಸಹಪಾಠಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿ
Thursday, July 13, 2023
ಜೈಪುರ: ಎಸ್ಎಸ್ಎಲ್ ಸಿ ವಿದ್ಯಾರ್ಥಿಯೋರ್ವನು ಸಹೋದರಿಯ ಸಹಕಾರದಿಂದ ತನ್ನ ಸಹಪಾಠಿಯ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದ ಉದಯ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಈ ವಿದ್ಯಾರ್ಥಿ ಮಾದಕವ್ಯಸನಿಯಾಗಿದ್ದು, ಆತನನ್ನು ವಶಕ್ಕೆ ಪಡೆದು ವ್ಯಸನಮುಕ್ತಿ ಕೇಂದ್ರದಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ 2022ರ ಆಗಸ್ಟ್ ತಿಂಗಳಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆರೋಪಿ ಹಾಗೂ ಸಂತ್ರಸ್ತೆಯಿಬ್ಬರೂ ಉದಯ್‌ಪುರದ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇವರಿಬ್ಬರೂ ಒಂದೇ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ್ದರು.
ಆರೋಪಿ ಬಾಲಕ ಸಂತ್ರಸ್ತೆಗೆ ಆಕೆಯ ನಗ್ನ ಫೋಟೋ ಹಾಗೂ ವೀಡಿಯೋ ಕಳಿಸುವಂತೆ ದುಂಬಾಲು ಬಿದಿದ್ದ. ಈ ಸಂಬಂಧ ಬಾಲಕಿ ಆತನಿಗೆ ಅನೇಕ ಬಾರಿ ಎಚ್ಚರಿಕೆ ನೀಡಿದ್ದಾಳೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಈ ಬಗ್ಗೆ ಆರೋಪಿಯೂ ತನ್ನ ಸಹೋದರಿಯೊಂದಿಗೆ ಚರ್ಚಿಸಿದ್ದು ಆಕೆಯು ಸಹ ಬಾಲಕಿಗೆ ಈ ಬಗ್ಗೆ ಒತ್ತಡ ಹಾಕಿದ್ದಾಳೆ.
ಇದಾದ ಕೆಲ ದಿನಗಳ ಬಳಿಕ ಬಾಲಕಿಯನ್ನು ತಮ್ಮ ಮನೆಯಲ್ಲಿ ಕಾರ್ಯಕ್ರಮ ಇರುವುದಾಗಿ ಕರೆಸಿಕೊಂಡದ್ದಾರೆ. ಬಳಿಕ ಆಕೆಯನ್ನು ರೂಮ್ ಒಂದರಲ್ಲಿ ಕೂಡಿ ಹಾಕಿ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದನ್ನು ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದು, ವಿಚಾರವನ್ನು ಯಾರಾದರ ಬಳಿ ಹೇಳಿದರೆ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಇತ್ತೀಚಿಗೆ ಆರೋಪಿ ತನ್ನ ಶಾಲೆಯ ವಾಟ್ಸ್ಆ್ಯಪ್ ಗ್ರೂಪಿನಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾನೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಾಂಶುಪಾಲರು ಸಂತ್ರಸ್ತೆಯ ಪೋಷಕರಿಗೆ ವಿಚಾರ ತಿಳಿಸಿದ್ದು, ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಪೊಕ್ಸೊ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಹಾಜರುಪಡಿಸಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.