ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಂಕಷ್ಟ: ಅಕ್ರಮದ ತನಿಖೆಗೆ ವಿಶೇಷಾಧಿಕಾರಿ ನೇಮಕ
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಂಕಷ್ಟ: ಅಕ್ರಮದ ತನಿಖೆಗೆ ವಿಶೇಷಾಧಿಕಾರಿ ನೇಮಕ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ವ್ಯಾಪಕ ಅವ್ಯವಹಾರ ಮತ್ತು ಅಕ್ರಮ ನಡೆದಿದೆ ಎಂಬ ಆರೋಪವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ವಿಶೇಷ ತನಿಖಾಧಿಕಾರಿಯನ್ನು ನೇಮಿಸಲಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಗೃತಿ ಕಾರ್ಯಕ್ರಮಕ್ಕೆ 17 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಇದರಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು.
ರಾಜ್ಯ ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹಾದೇವ ಅವರನ್ನು ಈ ಅಕ್ರಮದ ತನಿಖೆಗೆ ವಿಶೇಷಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಮಂಡಳಿಯ ಅಧ್ಯಕ್ಷ ಶಾಂತ ತಿಮ್ಮಯ್ಯ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಉಲ್ಲಂಘಿಸಿ 17 ಕೋಟಿ ರೂ. ವೆಚ್ಚದ ಜಾಗೃತಿ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದ್ದು, ಇದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಮಂಡಳಿಯ ಪ್ರಭಾಗ ಸದಸ್ಯ ಕಾರ್ಯದರ್ಶಿಯಾಗಿದ್ದ ಸೂರಿ ಪಾಯಲ ಅವರು ಮುಖ್ಯಮಂತ್ರಿ ಕಚೇರಿಗೆ ಲಿಖಿತ ದೂರು ಸಲ್ಲಿಸಿದ್ದರು.
ಈ ಪ್ರಕರಣದ ತನಿಖೆ ನಡೆಸುವಂತೆ ಕಾಂಗ್ರೆಸ್ ಮುಖಂಡ ಪಿ.ಆರ್. ರಮೇಶ್ ಅವರೂ ಪತ್ರ ಬರೆದಿದ್ದರು.