ವಿಟ್ಲ: ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ - ಮೂವರು ಕಾಮುಕರು ಅರೆಸ್ಟ್
Monday, July 31, 2023
ವಿಟ್ಲ: ಇತ್ತೀಚಿಗೆ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ವ್ಯಾಪಕವಾಗಿ ನಡೆಯುತ್ತಿದೆ. ದಿನವೂ ಅಲ್ಲಲ್ಲಿ ಇಂತಹ ಪ್ರಕರಣಗಳು ಕೇಳಿ ಬರುತ್ತಲೇ ಇದೆ. ಇದೀಗ ಮಂಗಳೂರಿನಲ್ಲೊಂದು ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇಲ್ಲಿ ಅಪ್ರಾಪ್ತೆಯ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಪ್ರಾಪ್ತೆಯ ಮೇಲೆ ಈ ಮೂವರು ಯುವಕರು ಅತ್ಯಾಚಾರ ಎಸಗಿದ್ದಾರೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು ಮಾಡಿ ಮೂವರನ್ನು ಬಂಧಿಸಲಾಗಿದೆ.
ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಮೂವರು ಬಂಧಿತ ಆರೋಪಿಗಳು.
ಈ ಮೂವರು, 2019ರಿಂದ ಈ ಅಪ್ರಾಪ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿವಿಧ ಕಡೆ ಅತ್ಯಾಚಾರ ಎಸಗಿದ್ದರು ಎನ್ನುವ ವಿಚಾರ ಸದ್ಯ ಕೇಳಿ ಬರುತ್ತಿದೆ. ಇವರ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.