ಖಾಸಗಿ ಕ್ಷಣಗಳ ವಿಡಿಯೋ ವೈರಲ್- ವಿದ್ಯಾರ್ಥಿ, ವಿದ್ಯಾರ್ಥಿನಿ ಆತ್ಮಹತ್ಯೆ
Saturday, July 29, 2023
ದಾವಣಗೆರೆ: ತಮ್ಮ ಖಾಸಗಿ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಮನನೊಂದು ನಗರದ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ.
ಕಾಲೇಜಿನ ವಿದ್ಯಾರ್ಥಿಗಳಾದ ಯುವಕ ಯುವತಿಯರಿಬ್ಬರೂ ಪ್ರೇಮಿಗಳಾಗಿದ್ದರು. ಅವರು ಕೆಲ ದಿನಗಳ ಹಿಂದೆ ಕಾಲೇಜಿನ ಮಹಡಿ ಮೇಲೆ ಖಾಸಗಿ ಕ್ಷಣಗಳನ್ನು ಕಳೆದಿದ್ದರು. ಇದನ್ನು ಎದುರಿನ ಕಟ್ಟಡವೊಂದರಲ್ಲಿ ನಿಂತು ಕೆಲವರು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ತುಣುಕುಗಳು ಎಲ್ಲೆಡೆ ಹರಿದಾಡಿದ್ದರಿಂದ ಮನ ನೊಂದ ಯುವತಿ ಶುಕ್ರವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವಿಷಯ ತಿಳಿದು ಯುವಕ ಸಹ ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಲೇಜಿನ ಹುಡುಗ ಹುಡುಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ವಿದ್ಯಾರ್ಥಿಗಳ ಪೋಷಕರು ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ.