ಕೊಣಾಜೆ: ಕಾಲ್ ಸೆಂಟರ್ ಉದ್ಯೋಗಿ ಆತ್ಮಹತ್ಯೆಗೆ ಶರಣು
Thursday, July 6, 2023
ಕೊಣಾಜೆ: ಇಲ್ಲಿನ ಪಜೀರುವಿನಲ್ಲಿ ಬಾಡಿಗೆ ಮನೆಯಲ್ಲಿ ತಾಯಿ, ಸಹೋದರನೊಂದಿಗೆ ವಾಸವಿದ್ದ ಯುವತಿಯೋರ್ವಳು ನೇಣಿಗೆ ಶರಣಾಗಿದ್ದಾರೆ.
ಪ್ರೀತಿಕಾ ಪೂಜಾರಿ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಪ್ರೀತಿಕಾ ಪಜೀರು ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರೊಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ ಕಚೇರಿಯಿಂದ ಬಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.