ಕಾರ್ಕಳ: ವಿವಾಹಿತೆ ಆತ್ಮಹತ್ಯೆಗೆ ಶರಣು
Tuesday, July 4, 2023
ಕಾರ್ಕಳ: ವಿವಾಹಿತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬಜಗೋಳಿ ಸಮೀಪ ಮುಟ್ರಾಲ್ ದೇವಸ್ಥಾನದ ಬಳಿ ಜು.3ರಂದು ರಾತ್ರಿ ನಡೆದಿದೆ.
ಇಲ್ಲಿನ ನಿವಾಸಿ ಪ್ರವೀಣ್ ಭಂಡಾರಿ ಎಂಬವರ ಪತ್ನಿ ಭವ್ಯಾ ಭಂಡಾರಿ (31) ಆತ್ಮಹತ್ಯೆ ಮಾಡಿಕೊಂಡವರು.
ಭವ್ಯಾ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣವೇನೆಂದು ಈವರೆಗೆ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.