-->
ಸುಳ್ಯದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ- ಹೊಟ್ಟೆನೋವು ತಪಾಸಣೆ ಬಂದಾಗ ಗರ್ಭಿಣಿಯಾಗಿರುವುದು ಬೆಳಕಿಗೆ

ಸುಳ್ಯದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ- ಹೊಟ್ಟೆನೋವು ತಪಾಸಣೆ ಬಂದಾಗ ಗರ್ಭಿಣಿಯಾಗಿರುವುದು ಬೆಳಕಿಗೆ


ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅಪರಾಧ ನಡೆಸಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಿ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ತಾಲ್ಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಬಂಧಿತ ಆರೋಪಿ. ಈತನ ವಿರುದ್ಧ ಲೈಂಗಿಕ ದೌರ್ಜನ್ಯದಿಂದ
ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಲಾಗಿದೆ.

ಆರೋಪಿಯು ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದನು.  ಸಂತ್ರಸ್ತ ಬಾಲಕಿಗೆ ಶುಕ್ರವಾರ (ಜುಲೈ 7) ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. 

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಸ್ಕ್ಯಾನಿಂಗ್ ಮಾಡಿಸುವಂತೆ ಸಲಹೆ ನೀಡಿದ್ದರು. ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವುದು ತಿಳಿದುಬಂದಿದೆ.

 ಈ ಬಗ್ಗೆ ಬಾಲಕಿ ಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ ಎಂಬುದಾಗಿ ಬಾಲಕಿಯ ತಾಯಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article