-->
UDUPI- ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ಸಾವು- ದೃಶ್ಯ ಮೊಬೈಲ್ ನಲ್ಲಿ ಸೆರೆ

UDUPI- ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ಸಾವು- ದೃಶ್ಯ ಮೊಬೈಲ್ ನಲ್ಲಿ ಸೆರೆ


ಉಡುಪಿ;ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು,ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಯುವಕನ ಮೃತದೇಹದ ಪತ್ತೆಗೆ ಕಾರ್ಯಚರಣೆ ನಡೆಸುತ್ತಿದ್ದಾರೆ.





ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದ. ಆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.
 ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article