Udupi: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪೂರ್ವನಿಯೋಜಿತ - ಪ್ರಮೋದ್ ಮಧ್ವರಾಜ್
Wednesday, July 26, 2023
ಉಡುಪಿ: ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ ವಿದ್ಯಾರ್ಥಿನಿಯರ ಚಿತ್ರೀಕರಣ ಮಾಡಿರುವ ಪ್ರಕರಣ ಹೇಯ ಕೃತ್ಯವಾಗಿದ್ದು ಇದು ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ಮಾಜಿ ಸಚಿವ , ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು,ಹಿಂದೂ ಹೆಣ್ಣುಮಕ್ಕಳನ್ನು ಬ್ಲಾಕ್ ಮೇಲ್ ಮಾಡುವ ಉದ್ದೇಶ ಇದರ ಹಿಂದೆ ಅಡಗಿದೆ.ಎಲ್ಲ ವಿದ್ಯಾಸಂಸ್ಥೆಗಳಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಇದೇ ರೀತಿ ಬ್ಲಾಕ್ ಮೇಲ್ ಮಾಡುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ.ತಕ್ಷಣ ಪೊಲೀಸ್ ಇಲಾಖೆ ಸಂಬಂಧಪಟ್ಟ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.ಈ ಮೂಲಕ ವಿದ್ಯಾ ಸಂಸ್ಥೆಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕಾಗಿದೆ ಎಂದು ತಿಳಿಸಿದ್ದಾರೆ.