ಶೌಚಾಲಯದಲ್ಲಿ ಅಶ್ಲೀಲ ವೀಡಿಯೋ: ಮೂವರು ವಿದ್ಯಾರ್ಥಿನಿಯರು ಕಾಲೇಜಿನಿಂದಲೇ ಅಮಾನತು
ಶೌಚಾಲಯದಲ್ಲಿ ಅಶ್ಲೀಲ ವೀಡಿಯೋ: ಮೂವರು ವಿದ್ಯಾರ್ಥಿನಿಯರು ಕಾಲೇಜಿನಿಂದಲೇ ಅಮಾನತು
ಉಡುಪಿ ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಮ್‌ನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮಾರ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೋ ಚಿತ್ರೀಕರಿಸಿದ್ದರು. ಮಾತ್ರವಲ್ಲದೆ
ಅದನ್ನು ವಾಟ್ಸ್ಯಾಪ್ ಗ್ರೂಪ್‌ಗಳ ಮೂಲಕ ವೈರಲ್ ಮಾಡಿದ್ದರು.
ಇದು ಗೊತ್ತಾಗುತ್ತಿದ್ದಂತೆಯೇ, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಈ ಅಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ತಂದು ಆಕ್ಷೇಪಿಸಿದರು. ಎರಡೂ ಗುಂಪಿನ ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ವಾಗ್ವಾದ ನಡೆಯಿತು. ಆ ನಂತರ ಮಧ್ಯಪ್ರವೇಶಿಸಿದ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಪಡೆದು ಶಿಸ್ತು ಕ್ರಮ ಜರುಗಿಸಿದೆ.
ಘಟನೆಗೆ ಸಂಬಂಧಿಸಿದಂತೆ ವೀಡಿಯೋ ಚಿತ್ರೀಕರಣ ಮಾಡಿದ್ದ ಮತ್ತು ಅದನ್ನು ವೈರಲ್ ಮಾಡಿದ್ದ ಮೂವರು ವಿದ್ಯಾರ್ಥಿನಿಯರನ್ನು ತಕ್ಷಣದಿಂದ ಅಮಾನತು ಮಾಡಲಾಗಿದೆ.