ಪೆಟ್ರೋಲ್ ಬಂಕ್ ಗೆ ನುಗ್ಗಿ 10ಲಕ್ಷ ಮೌಲ್ಯದ ಪೆಟ್ರೋಲ್, ಡೀಸೆಲ್ ರಸ್ತೆಗೆ ಹರಿಯಬಿಟ್ಟ ದುಷ್ಕರ್ಮಿಗಳು
Tuesday, August 22, 2023
ಮಂಡ್ಯ: ರಾತ್ರೋರಾತ್ರಿ ಪೆಟ್ರೋಲ್ ಬಂಕ್ ಒಂದಕ್ಕೆ ನುಗ್ಗಿರುವ ದುಷ್ಕರ್ಮಿಗಳು ಬಂಕ್ ನಿಂದ ಸುಮಾರು 10 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಹರಿಬಿಟ್ಟು ಅಟ್ಟಹಾಸವನ್ನು ಮೆರೆದಿರುವ ಘಟನೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ನಲ್ಲಿ ನಡೆದಿದೆ.
ಸಿಬ್ಬಂದಿ, ರಾತ್ರಿ ಊಟಕ್ಕೆ ತೆರಳಿದ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ಗೆ ನುಗ್ಗಿದ ದುಷ್ಕರ್ಮಿಗಳು ಜನರೇಟರ್ ಆನ್ ಮಾಡಿ, ಪೆಟ್ರೋಲ್ ಹಾಗೂ ಡೀಸೆಲ್ ಪಂಪ್ ಓಪನ್ ಮಾಡಿ ಹೊರಗೆ ಬಿಟ್ಟು ಪರಾರಿಯಾಗಿದ್ದಾರೆ.
ಭಸ್ತಿರಂಗಪ್ಪ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್ನಲ್ಲಿ ಕಿಡಿಗೇಡಿಗಳು ಈ ಅಟ್ಟಹಾಸ ಮೆರೆದಿದ್ದಾರೆ. ಭಸ್ತಿರಂಗಪ್ಪನವರು ಕಳೆದ ಎರಡು ತಿಂಗಳ ಹಿಂದೆಯಷ್ಟೆ ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಕೃತ್ಯದಿಂದ ಸುಮಾರು 10 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಹಾಗೂ ಡೀಸೆಲ್ ರಸ್ತೆಗೆ ಹರಿದು ಹೋಗಿದೆ.
ಎಂಟು ಸಾವಿರ ಲೀಟರ್ ಪೆಟ್ರೋಲ್ ಹಾಗೂ ಎರಡು ಸಾವಿರ ಲೀಟರ್ ಡೀಸೆಲ್ ಸಂಪೂರ್ಣ ನಾಶವಾಗಿದೆ. ಸ್ವಲ್ಪ ಬೆಂಕಿ ಹಚ್ಚಿದರೂ ಭಾರೀ ಅನಾಹುತ ಸಂಭವಿಸುತ್ತಿತ್ತು. ಈ ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.