-->
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ : 2ಕೆಜಿ ಮಾದಕದ್ರವ್ಯದೊಂದಿಗೆ ಆರೋಪಿ ಅಂದರ್

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ : 2ಕೆಜಿ ಮಾದಕದ್ರವ್ಯದೊಂದಿಗೆ ಆರೋಪಿ ಅಂದರ್


ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿರುವ ಕಾರ್ಯಚರಣೆಯಲ್ಲಿ ಪಂಪ್ ವೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು 2ಕೆಜಿ ಗಾಂಜಾದೊಂದಿಗೆ ವಶಪಡಿಸಿಕೊಳ್ಳಲಾಗಿದೆ.

ಕೋಡಿಕಲ್, ಜೆ ಎಂ ರಸ್ತೆಯ ನಿವಾಸಿ ಮೊಹಮ್ಮದ್ ಅಝೀಝ್(40) ಬಂಧಿತ ಆರೋಪಿ.


ನಗರದ ಕಂಕನಾಡಿ ಪಂಪ್ ವೆಲ್ ಪರಿಸರದಲ್ಲಿ ಮೊಹಮ್ಮದ್ ಅಝೀಝ್ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆತನಲ್ಲಿ 2 ಕೆ ಜಿ ತೂಕದ ಆಂದಾಜು  50,000 ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿ, ಗಾಂಜಾ ಮಾರಾಟಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ.


ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,05,000 ರೂ ಆಗಬಹುದೆಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

    

Ads on article

Advertise in articles 1

advertising articles 2

Advertise under the article