9 ನೇ ತರಗತಿ ವಿದ್ಯಾರ್ಥಿನಿಯ KIDNAP ಮಾಡಿ ಸಾಮೂಹಿಕ ಅತ್ಯಾಚಾರ
Friday, August 4, 2023
ಜೈಪುರ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ರಾಜಸ್ಥಾನದ ಡುಂಗಾರುರ ಜಿಲ್ಲೆಯಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ದೊವರ ಠಾಣಾಧಿಕಾರಿ ಹೇಮಂತ್ ಚೌಹಾಣ್ ತಿಳಿಸಿದ್ದಾರೆ.ಆರೋಪಿಗಳಲ್ಲಿ ವಿದ್ಯಾರ್ಥಿನಿಯ ಪರಿಚಿತ ಕೂಡಾ ಸೇರಿದ್ದ ಎಂದು ಅವರು ಹೇಳಿದ್ದಾರೆ.
ಬುಧವಾರ ಸಂಜೆ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಅಪಹರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ