ಮಂಗಳೂರು: ಟಿಪ್ಪರ್ ಡಿಕ್ಕಿ - ಸ್ಕೂಟರ್ ಸವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿ ದುರ್ಮರಣ
Sunday, August 27, 2023
ಮಂಗಳೂರು: ನಗರ ಹೊರವಲಯದ ಅಡ್ಯಾರ್ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಹಿಂಬದಿ ಸವಾರ, ಎಸ್ಎಸ್ಎಲ್ ಸಿ ವಿದ್ಯಾರ್ಥಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಮೃತಪಟ್ಟ ವಿದ್ಯಾರ್ಥಿ.
ನಗರದ ಮಿಲಾಗ್ರಿಸ್ ಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿಯಾಗಿದ್ದ ಶರಫುದ್ದೀನ್ ತನ್ನ ಸ್ನೇಹಿತನೊಂದಿಗೆ ಸ್ಕೂಟರಿನಲ್ಲಿ ಸವಾರಿ ಮಾಡುತ್ತಿದ್ದ. ಸ್ಕೂಟರ್ ಅಡ್ಯಾರ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಶರಫುದ್ದೀನ್ ತಲೆಗೆ ಗಂಭೀರ ಗಾಯಗೊಂಡಿದೆ.
ತೀವ್ರ ರಕ್ತಸ್ರಾವಗೊಂಡ ಅವರನ್ನು ತಕ್ಷಣ ಸ್ಥಳೀಯರು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಬಂದಿದೆ.