-->
ಮಡಿಕೇರಿ: ಕಾಫಿತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಅಸಾಮಿ ಅರೆಸ್ಟ್

ಮಡಿಕೇರಿ: ಕಾಫಿತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಅಸಾಮಿ ಅರೆಸ್ಟ್

ಮಡಿಕೇರಿ: ಕಾಫಿತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಅಸಾಮಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ತಾಲೂಕಿನ ಗೂಡುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ.

ಕಿರಣ್ ತಮ್ಮ ಮನೆಯ ಹಿಂಭಾಗದ ಕಾಫಿತೋಟದಲ್ಲಿ ಗಾಂಜಾ ಬೆಳೆದಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಬೆಳೆದಿದ್ದ 31 ಕೆಜಿ 900 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.

ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತ ಅನೂಪ್ ಮಾದಪ್ಪ ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Ads on article

Advertise in articles 1

advertising articles 2

Advertise under the article