ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕ ಸ್ಥಳದಲ್ಲಿಯೇ ಇಬ್ಬರಿಂದ ಗಲಾಟೆ - ಆರೋಪಿಗಳು ಅರೆಸ್ಟ್
Tuesday, August 22, 2023
ಮಂಗಳೂರು: ನಗರದ ಹೊರವಲಯದ
ಗುರುಪುರ ಕೈಕಂಬ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿಯೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಗಳವಾಡುತ್ತಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ.
ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಬಂಧಿತ ಆರೋಪಿಗಳು.
ವೈಯಕ್ತಿಕ ವಿಚಾರದಲ್ಲಿ ಆರೋಪಿಗಳಿಬ್ಬರು ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳೀಯರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.