ಕುಮಾರ್ ಬಂಗಾರಪ್ಪ CONGRESS ಸೇರ್ಪಡೆ ಬಗ್ಗೆ ಹೈಕಮಾಂಡ್ ನಿರ್ಧಾರ: ಜಿಲ್ಲಾಧ್ಯಕ್ಷ
Friday, August 25, 2023
ಬೆಂಗಳೂರು: 'ಸಿಎಂ ಹಾಗೂ ಡಿಸಿಎಂ ನೀಡಿರುವ ಜವಾಬ್ದಾರಿಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯವಿದ್ದರೂ ಸರಿಪಡಿಸಿಕೊಳ್ಳುತ್ತೇವೆ. ಆದರೆ, ಬಿಜೆಪಿಯ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲೇ ನಿರ್ಧಾರ ಆಗುತ್ತದೆ' ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸೇರಿಸಿಕೊಳ್ಳುತ್ತೇವೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಆದರೆ ಕುಮಾರ್ ಬಂಗಾರಪ್ಪಈಗಾಗಲೇ ಸಚಿವರಾಗಿದ್ದವರು. ಮೂರ್ನಾಲ್ಕು ಬಾರಿ ಶಾಸಕರಾಗಿದ್ದರು. ಹೀಗಾಗಿ ಕುಮಾರ್ ಬಂಗಾರಪ್ಪ ಅವರ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರ ಆಗುತ್ತದೆ. ಹೈಕಮಾಂಡ್ ನಿರ್ಧಾರ ಏನೇ ಇದ್ದರೂ ಅದಕ್ಕೆ ಬದ್ಧವಾಗಿರುತ್ತೇವೆ. ಸಣ್ಣ ಪುಟ್ಟ ಸಮಸ್ಯೆಯಿದ್ದರೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.