"ಗ್ಯಾರಂಟಿ" ಸ್ಕೀಮ್ ಬಗ್ಗೆ ಸಿದ್ದರಾಮಯ್ಯ ಮತ್ತೊಂದು ಶಾಕ್: ಶಕ್ತಿ ಉಚಿತ ಪ್ರಯಾಣದ ಬಗ್ಗೆ ಸಿಎಂ ಹೇಳಿದ್ದೇನು..?
"ಗ್ಯಾರಂಟಿ" ಸ್ಕೀಮ್ ಬಗ್ಗೆ ಸಿದ್ದರಾಮಯ್ಯ ಮತ್ತೊಂದು ಶಾಕ್: ಶಕ್ತಿ ಉಚಿತ ಪ್ರಯಾಣದ ಬಗ್ಗೆ ಸಿಎಂ ಹೇಳಿದ್ದೇನು..?
ರಾಜ್ಯದಲ್ಲಿ ಜನಪ್ರಿಯವಾಗಿರುವ "ಗ್ಯಾರಂಟಿ" ಸ್ಕೀಮ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಟ್ವಿಟ್ಟರ್‌ನಲ್ಲಿ ಭಾರೀ ಟ್ರೆಂಡ್ ಆಗಿದೆ.
ಯಾವುದೇ ಕಾರಣಕ್ಕೂ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದ ಎಲ್ಲ ಅಪಪ್ರಚಾರ, ವದಂತಿಗಳನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.
ಪ್ರತಿಪಕ್ಷಗಳು ಆರಂಭದಲ್ಲಿ ಗ್ಯಾರಂಟಿ ಯೋಜನೆಗಳೇ ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದ್ದವು. ಈಗ ಈ ಯೋಜನೆಗಳು ದೀರ್ಘ ಕಾಲ ಉಳಿಯುವಿಲ್ಲ ಎಂದು ಹೇಳುತ್ತಿವೆ. ಈ ಅಪಪ್ರಚಾರ, ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ನಮ್ಮದು ನುಡಿದಂತೆ ನಡೆದಿರುವ ಸರ್ಕಾರ. ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಗ್ಯಾರಂಟಿ ಸ್ಕೀಮ್‌ಗಳ ಬಗ್ಗೆ ಅಪಪ್ರಚಾರ ನಡೆಸುತ್ತಿದೆ. ಯೋಜನೆಯ ಯಶಸ್ಸನ್ನು ಸಹಿಸದ ಪ್ರತಿಪಕ್ಷಗಳು ಇದರಲ್ಲಿ ತೊಡಗಿವೆ. ಈ ಯೋಜನೆಯು ಐದು ವರ್ಷವಲ್ಲ, ಇನ್ನೂ ಹತ್ತು ವರ್ಷ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.