-->
MANGALORE CCB ಕಾರ್ಯಾಚರಣೆ:  MDMA ಹೊಂದಿದ 3 ಡ್ರಗ್ ಪೆಡ್ಲರ್ ಗಳ ಸೆರೆ

MANGALORE CCB ಕಾರ್ಯಾಚರಣೆ: MDMA ಹೊಂದಿದ 3 ಡ್ರಗ್ ಪೆಡ್ಲರ್ ಗಳ ಸೆರೆ



 
ಮಂಗಳೂರು:“ಡ್ರಗ್ಸ್ ಫ್ರಿ ಮಂಗಳೂರು”* ಮಾಡುವ ನಿಟ್ಟಿನಲ್ಲಿ ಮಂಗಳೂರು CCB ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ.


ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಬಸ್ತಿಗುಡ್ಡೆಯ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35),  ಸಜಿಪ ಮುನ್ನೂರು ಗ್ರಾಮದ  ಪಾಣೆಮಂಗಳೂರು ದಾಸರಗುಡ್ಡೆಯ   ಜಾಕೀರ್ ಹುಸೇನ್ ಯಾನೆ ತಾಚೀ(28), ಸಜಿಪ ಮುನ್ನೂರು ಗ್ರಾಮದ ನಂದಾವರದ    ಅಮೀರ್ ಯಾನೆ ಅಮ್ಮಿ(34)
 ಬಂಧಿತರು.

   ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಇವರು   ಕಾರಿನಲ್ಲಿ  ಮಾದಕ ವಸ್ತುವಾದ MDMA ನ್ನು  ಬೆಂಗಳೂರಿನಿಂದ ಖರೀದಿಸಿಕೊಂಡು  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಸಿಸಿಬಿ ಪೊಲೀಸರು ದಾಳಿ ನಡೆಸಿ  ಆರೋಪಿಗಳನ್ನು ಬಂಧಿಸಿ MDMA ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


  ಇವರ ವಶದಿಂದ ಒಟ್ಟು 200 ಗ್ರಾಂ ತೂಕದ ರೂ. 10 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000/- ಮೌಲ್ಯದ 3 ಮೊಬೈಲ್ ಫೋನ್ ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 15,70,500/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

   ಆರೋಪಿಗಳ ಪೈಕಿ  ಜಾಕೀರ್ ಹುಸೇನ್ ಯಾನೆ ತಾಚೀ ಎಂಬಾತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣ, ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜ್ಯಾರಿಯಾಗಿರುತ್ತದೆ. 
   
ಇನ್ನೋರ್ವ ಆರೋಪಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

  ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

Ads on article

Advertise in articles 1

advertising articles 2

Advertise under the article