Mangalore- ಚಲಿಸುತ್ತಿದ್ದ ಬಸ್ ನಿಂದ ಬಿದ್ದ ಕಂಡಕ್ಟರ್- ಭಯಾನಕ ವಿಡಿಯೋ ವೈರಲ್ ( VIDEO)
Wednesday, August 30, 2023
ಮಂಗಳೂರು: ಸಿಟಿ ಬಸ್ ಕಂಡಕ್ಟರ್ ಸಂಚಾರದಲ್ಲಿದ್ದ ಬಸ್ ನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ನಂತೂರಿನಲ್ಲಿ ಈ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ನಿವಾಸಿ, ಪ್ರಸ್ತುತ ಸುರತ್ಕಲ್ ತಡಂಬೈಲ್ ನಲ್ಲಿ ವಾಸ್ತವ್ತವಿರುವ ಈರಯ್ಯ (23) ಸಾವನ್ನಪ್ಪಿದ ಕಂಡಕ್ಟರ್. 15 ನಂಬರ್ ಖಾಸಗಿ ಸಿಟಿ ಬಸ್ ನಲ್ಲಿ ಅವರು ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ ವೇಳೆಗೆ ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗದಲ್ಲಿ ತಿರುವು ಪಡೆದಾಗ ಬಸ್ ನ ಮುಂಭಾಗದ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ತಕ್ಷಣ ಸ್ಥಳಲ್ಲಿದ್ದ ಟ್ರಾಫಿಕ್ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ರಸ್ತೆಗೆಸೆಯಲ್ಪಟ್ಟ ಕಂಡೆಕ್ಟರ್ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಮೃತ ಪಟ್ಟಿದ್ದಾರೆ. ಇದೀಗ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.