ಎನ್ ಸಿ ಸಿ ಕಿರಿಯ ವಿದ್ಯಾರ್ಥಿಗಳಿಗೆ ಅಮಾನುಷವಾಗಿ ಥಳಿಸಿದ ಹಿರಿಯ ವಿದ್ಯಾರ್ಥಿ - ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು
Saturday, August 5, 2023
ಥಾಣೆ: ಜೋಶಿ ಬೇಡೇಕರ್ ಕಾಲೇಜಿನ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ನ (ಎನ್ ಸಿ ಸಿ) ಕಿರಿಯ ವಿದ್ಯಾರ್ಥಿಗಳನ್ನು ಅಮಾನುಷವಾಗಿ ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೈಹಿಕ ತರಬೇತಿ ನಡೆಯುತ್ತಿತ್ತು. ಈ ವೇಳೆ 8 ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿ ಹಲ್ಲೆ ನಡೆಸಿದ್ದಾನೆ. ಈತ ವಿದ್ಯಾರ್ಥಿಗಳ ಕೈಯನ್ನು ಹಿಂದಕ್ಕೆ ಕಟ್ಟಿ ಕೆಸರಿನಲ್ಲಿ ತಲೆ ಬಾಗಿಸಿ ನಿಲ್ಲಿಸಿ ದೊಣ್ಣೆಯಿಂದ ಹಿಂಬದಿಗೆ ಅಮಾನುಷವಾಗಿ ಹೊಡೆದಿದ್ದಾನೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಶುಕ್ರವಾರ ರಾತ್ರಿ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ವಿದ್ಯಾರ್ಥಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 323 ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.