ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಿವೃತ್ತ ಪಿಎಸ್ಐ ಅರೆಸ್ಟ್
Tuesday, August 15, 2023
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಶಿವಾಜಿನಗರ ಪೊಲೀಸರು ನಿವೃತ್ತ ಪಿಎಸ್ಐನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್(74) ಬಂಧಿತ ಆರೋಪಿ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಕೃತ್ಯದ ಕುರಿತು ಸಂತ್ರಸ್ತೆಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.