-->
ರಾಹುಲ್ ಗಾಂಧಿಗೆ ಬಿಗ್ ರಿಲೀಫ್- ಮೋದಿ ಉಪನಾಮ ಪ್ರಕರಣದಲ್ಲಿ ಮಧ್ಯಂತರ ತಡೆ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್- ಮೋದಿ ಉಪನಾಮ ಪ್ರಕರಣದಲ್ಲಿ ಮಧ್ಯಂತರ ತಡೆ





ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಂದು (ಶುಕ್ರವಾರ) ಸರ್ವೋಚ್ಚ ನ್ಯಾಯಾಲಯದಲ್ಲಿ
ಬಿಗ್  ರಿಲೀಫ್ ಸಿಕ್ಕಿದೆ. 


ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಶಿಕ್ಷೆಗೆ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ ರಾಹುಲ್ ಅವರ ಸಂಸತ್‌ ಸದಸ್ಯ ಸ್ಥಾನ ಸದ್ಯಕ್ಕೆ ಅಬಾಧಿತವಾಗಿದೆ ಎಂದು ತಿಳಿದುಬಂದಿದೆ.


ನ್ಯಾ.ಬಿ.ಆರ್.ಗವಾಯಿ, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಈ ಆದೇಶ ಪ್ರಕಟಿಸಿದೆ. ಸಾರ್ವಜನಿಕ ಜೀವನದಲ್ಲಿರುವ ಜನರು ಭಾಷಣ

ಮಾಡುವಾಗ ಎಚ್ಚರಿಕೆಯನ್ನು ವಹಿಸಬೇಕು. ಅದನ್ನೇ ಎಲ್ಲರೂ ನಿರೀಕ್ಷಿಸುತ್ತಾರೆ" ಎಂದು ಕೋರ್ಟ್ ಸಲಹೆ ನೀಡಿದೆ.



"ಗುಜರಾತ್ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ವಿಧಿಸುವಾಗ ಸೂಕ್ತ ಕಾರಣಗಳನ್ನು ನೀಡಿರುವುದಿಲ್ಲ. ಮುಂದಿನ ವಿಚಾರಣೆಯವರೆಗೂ ಶಿಕ್ಷೆಗೆ ತಡೆ ನೀಡಲಾಗುತ್ತದೆ" ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.



ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘಿ, "ದೂರದಾರ ಪೂರ್ಣೇಶ್ ಮೋದಿ ಮೋದಿ ಅವರ ಮೂಲ ಉಪನಾಮ ಮೋದಿ ಅಲ್ಲ. ಈ ಉಪನಾಮವನ್ನು ನಂತರ ತಮ್ಮ ಹೆಸರಿನೊಂದಿಗೆ ಅವರು ಸೇರಿಕೊಂಡಿದ್ದಾರೆ" ಎಂದು ನ್ಯಾಯಪೀಠದ ಗಮನ ಸೆಳೆದಿದ್ದಾರೆ.

ಅವರು ಮುಂದುವರೆದು, "ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಯಾವ ವ್ಯಕ್ತಿ ಕೂಡ ಮೊಕದ್ದಮೆಯನ್ನು ಹೂಡಿಲ್ಲ. ಇದು 13 ಕೋಟಿ ಜನರಿರುವ ಸಣ್ಣ ಸಮುದಾಯವಾಗಿದ್ದು, ಏಕರೂಪತೆಯನ್ನು ಹೊಂದಿಲ್ಲ. ಈ ವಿಷಯದಲ್ಲಿ ನೊಂದವರು ಬಿಜೆಪಿ ನಾಯಕರು ಹಾಗೂ ಮೊಕದ್ದಮೆ ಹೂಡಿದವರು ಮಾತ್ರ" ಎಂದು ಸಿಂಘಿ ಹೇಳಿದರು.


ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಗೆ ತಡೆದ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಮತ್ತು ಪಕ್ಷದ ನಾಯಕರು ಸ್ವಾಗತಿಸಿದ್ದಾರೆ. "ಯಾವುದೇ ಶಕ್ತಿಯೂ ಜನರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರಾಹುಲ್ ಗಾಂಧಿ ಸಂಸತ್ ಸ್ಥಾನದ ಅರ್ಹತೆಯನ್ನು ಪುನ‌ ಸ್ಥಾಪಿಸಬೇಕೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪಕ್ಷದ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.


 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು "ಮೋದಿ ಉಪನಾಮ ಹೊಂದಿದ ಎಲ್ಲರೂ ಏಕೆ ಕಳ್ಳರಾಗ್ತಾರೆ' ಎಂಬ ಹೇಳಿಕೆಯನ್ನು ನೀಡಿದ್ದರು. ಈ ಕುರಿತು ಗುಜರಾತ್ ಬಿಜೆಪಿ ಶಾಸಕ, ಮಾಜಿ ಸಚಿವ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಸೂರತ್‌ ನ್ಯಾಯಾಲಯವು 2023ರ ಮಾರ್ಚ್ 24ರಂದು ರಾಹುಲ್‌ ಗಾಂಧಿ ದೋಷಿ ಎಂದು ಘೋಷಿಸಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಇದರ ಪರಿಣಾಮ ಕೇರಳದ ವಯನಾಡು ಕ್ಷೇತ್ರ ಪ್ರತಿನಿಧಿಸುತ್ತಿದ್ದ ರಾಹುಲ್ ಗಾಂಧಿ ಸಂಸತ್ ಸ್ಥಾನವನ್ನು ಅನರ್ಹಗೊಳಿಸಲಾಗಿತ್ತು.

Ads on article

Advertise in articles 1

advertising articles 2

Advertise under the article