Sullya:- ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾದ ಕಾರು.. ಮೂವರು ದುರ್ಮರಣ..!
Thursday, August 31, 2023
ಸುಳ್ಯ
ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸಂಭವಿಸಿದೆ.
ಹಾವೇರಿ ಜಿಲ್ಲೆಯ ಕಾಕೊಳ ತಾಂಡ ಗ್ರಾಮದ ನಿವಾಸಿಗಳಾದ ಕಾರ್ಮಿಕರಾದ ಚೆನ್ನಪ್ಪ, ರೇಖಪ್ಪ, ಮಹಂತಪ್ಪ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಚೆನ್ನಪ್ಪ, ರೇಖಪ್ಪ, ಮಹಂತಪ್ಪ, ವೆಂಕಪ್ಪ, ಎಂಬವರಿಗೆ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡವರ ಪೈಕಿ ಚೆನ್ನಪ್ಪ ಎಂಬವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ರೇಖಪ್ಪ ಮತ್ತು ಮಹಂತಪ್ಪ ಎಂಬವರುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿತ್ತು. ರೇಖಪ್ಪ ಎಂಬವರು ಮಂಗಳೂರಿಗೆ ಹೋಗುವ ವೇಳೆ ಮತ್ತು ಮಹಂತಪ್ಪ ರವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.