ಮಂಗಳೂರು: ಸೌಜನ್ಯಾ ಕುಟುಂಬದ ರಕ್ಷಣೆಗೆ ಸರಕಾರ ಬದ್ಧ - ಕಾಂಗ್ರೆಸ್ ಟ್ವೀಟ್
Saturday, August 5, 2023
ಮಂಗಳೂರು: ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ. ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ. ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುವುದನ್ನು ಧರ್ಮ ಎನ್ನಲಾಗದು. ಪೊಲೀಸರು ಸೌಜನ್ಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಲಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.
ಧರ್ಮಸ್ಥಳ ಕ್ಷೇತ್ರದ ಅವಹೇಳನ ಮಾಡಲಾಗುತ್ತಿದೆ ಎಂದು ಧರ್ಮಸ್ಥಳದ ಭಕ್ತರಿಂದ ಉಜಿರೆ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆದಿತ್ತು. ಈ ವೇಳೆ ಜಸ್ಟಿಸ್ ಫಾರ್ ಸೌಜನ್ಯಾ ಫ್ಲಕ್ ಕಾರ್ಡ್ ಹಿಡಿದು ಅಲ್ಲಿಗೆ ಬಂದ ಸೌಜನ್ಯಾ ತಾಯಿ ಕುಸುಮಾವತಿ, ಸೌಜನ್ಯಾ ಸಹೋದರ ಜಯರಾಂಗೆ ಹಲ್ಲೆ ಯತ್ನ ನಡೆದಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.