ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಸೆ.19ರಂದು ಸರಕಾರಿ ರಜೆ ಘೋಷಣೆ
Saturday, September 16, 2023
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಣೇಶೋತ್ಸವದ ಸಾರ್ವತ್ರಿಕ ರಜೆಯನ್ನು ಸೋಮವಾರಕ್ಕೆ ಬದಲಾಗಿ ಮಂಗಳವಾರ ನೀಡವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ಗಣೇಶೋತ್ಸವದ ರಜೆಯ ಬಗ್ಗೆ ಹಲವು ದಿನಗಳಿಂದ ಗೊಂದಲ ಸೃಷ್ಟಿಯಾಗಿತ್ತು. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ಹಬ್ಬ ಆಚರಿಸಲಾಗುತ್ತಿದೆ. ಆದರೆ ಸರ್ಕಾರ ನಿಗದಿಪಡಿಸಿರುವ ರಜೆ ಸೋಮವಾರವಾಗಿತ್ತು. ಆದರೆ ಕರಾವಳಿಯಲ್ಲಿ ಮಂಗಳವಾರ ಗಣೇಶನ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು.
ಈ ಬಗ್ಗೆ ಜನಪ್ರತಿನಿಧಿಗಳು ಮಂಗಳವಾರವೇ ರಜೆ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮುಖೇನ ತಿಳಿಸಿದ್ದಾರೆ. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ. ಆದ್ದರಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸೆ.19 ಮಂಗಳವಾರವೇ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ.