ಪುತ್ತೂರು- 19 ವರ್ಷದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Monday, September 25, 2023
ಪುತ್ತೂರು : ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.
ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿ ಕೀರ್ತಿಕಾ (19) ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರಿನ ಪಡ್ನೂರು ಸನ್ನಿದಿ ಲೇ ಔಟ್ ನಿವಾಸಿ ಪುತ್ತೂರಿನಲ್ಲಿ ಮೆಡಿಕಲ್ ಶಾಪ್ ಹೊಂದಿರುವ ಕಿಶೋರ್ ಕುಮಾರ್ ಎಂಬವರ ಪುತ್ರಿ ಈಕೆ.
ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲೀಂಗ್ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.