ರುಚಕ ರಾಜಯೋಗ ನಿರ್ಮಾಣ ಈ 3 ರಾಶಿಯವರಿಗೆ ಅಪಾರ ಅದೃಷ್ಟ ಪ್ರಾಪ್ತಿ...!
Friday, September 22, 2023
ವೃಷಭ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದು, ನಿರ್ಮಾಣಗೊಳ್ಳುತ್ತಿರುವ ರುಚಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧಗಳು ಉತ್ತಮವಾಗಿರಲಿವೆ. ಪಾಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಉತ್ತಮ ಲಾಭ ಉಂಟಾಗುವ ಸಾಧ್ಯತೆ ಇದೆ.
ಕರ್ಕ ರಾಶಿ: ರುಚಕ ರಾಜಯೋಗ ಕರ್ಕ ರಾಶಿಯ ಜಾತಕದವರಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಮಂಗಳ ಗ್ರಹ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳ ವತಿಯಿಂದ ನಿಮಗೆ ಸಂತಸದ ಸಮಾಚಾರ ಸಿಗುವ ಸಾಧ್ಯತೆ ಇದೆ.
ತುಲಾ ರಾಶಿ: ರುಚಕ ರಾಜಯೋಗದ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಯೋಗ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಜೊತೆಗೆ ಸಿಲುಕಿಕೊಂಡಿರುವ ನಿಮ್ಮ ಹಣ ನಿಮ್ಮತ್ತ ಮರಳಲಿದೆ.