-->
ಕೂದಲು ಉದುರುವ ಸಮಸ್ಯೆಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಈ 5 ಹಣ್ಣುಗಳು...!

ಕೂದಲು ಉದುರುವ ಸಮಸ್ಯೆಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಈ 5 ಹಣ್ಣುಗಳು...!



ಸೇಬು 
ಸೇಬು ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಸೇಬಿನ ಸೇವನೆಯು ತುಂಬಾ ಪ್ರಯೋಜನಕಾರಿ. ಆಪಲ್ ವಿಟಮಿನ್ ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಕೂದಲನ್ನು ಪೋಷಿಸುತ್ತದೆ. 

ಅನಾನಸ್
ಅನಾನಸ್ ಆಂಟಿಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿದೆ. ಇದು ಫ್ರೀ ರಾಡಿಕಲ್‌ಗಳಿಂದ ಕೂದಲನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಅನಾನಸ್‌ನಲ್ಲಿ ವಿಟಮಿನ್-ಸಿ, ವಿಟಮಿನ್-ಬಿ6 ಮತ್ತು ಮೆಗ್ನೀಸಿಯಮ್ ಕೂಡಾ ಇದೆ. ಇದು ಕೂದಲನ್ನು ಬಲಪಡಿಸಲು ಅವಶ್ಯಕವಾಗಿದೆ. ಅನಾನಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ತಲೆಹೊಟ್ಟು ಮತ್ತು ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.


ಪಪ್ಪಾಯ ಹಣ್ಣು : 
ಪಪ್ಪಾಯ ಆರೋಗ್ಯಕ್ಕೆ ಹಾಗೂ ಕೂದಲಿಗೆ ತುಂಬಾ ಪ್ರಯೋಜನಕಾರಿ. ವಿಟಮಿನ್ ಮತ್ತು ಅಮೈನೋ ಆಮ್ಲಗಳು ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿರುತ್ತವೆ. ಇದು ಕೂದಲನ್ನು ಪೋಷಿಸುತ್ತದೆ ಮತ್ತು ಅವುಗಳನ್ನು ಬಲವಾಗಿ ಮಾಡುತ್ತದೆ. 

ಬಾಳೆಹಣ್ಣು : 
ಕೂದಲು ಉದುರುವಿಕೆಯ ಸಮಸ್ಯೆಗೆ ಬಾಳೆಹಣ್ಣು ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ 12 ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. 

ಸೀಬೆಹಣ್ಣು : 
ಕೂದಲು ಉದುರುವುದನ್ನು ತಡೆಯಲು ಪೇರಳೆ ಅಥವಾ ಸೀಬೆ ಹಣ್ಣನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಈ ಹಣ್ಣಿನಲ್ಲಿರುವ ಅಂಶಗಳು ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ.


Ads on article

Advertise in articles 1

advertising articles 2

Advertise under the article