ಸುಳ್ಯ: ಮಸೂದ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
Thursday, September 7, 2023
ಸುಳ್ಯ: ಇಲ್ಲಿನ ಸುಳ್ಯದ ಕಳಂಜ ಎಂಬಲ್ಲಿ ನಡೆದಿರುವ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಎಂಬವರಿಗೆ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜಿತ್ ಎಸ್. ಶೆಟ್ಟಿ ಜಾಮೀನು ಮಂಜೂರು ಮಾಡಿದರು.
ಆರೋಪಿಗಳ ಪರವಾಗಿ ಹಿರಿಯ ವಕೀಲಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.