-->
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ BJP ಸಂಪೂರ್ಣ ನಿರ್ಮೂಲನೆ: ಸಚಿವ ಜಮೀರ್ ಅಹ್ಮದ್ ಖಾನ್

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ BJP ಸಂಪೂರ್ಣ ನಿರ್ಮೂಲನೆ: ಸಚಿವ ಜಮೀರ್ ಅಹ್ಮದ್ ಖಾನ್


ಮಂಗಳೂರು: ಪ್ರಧಾನಮಂತ್ರಿ  ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಸಿಕ್ಕಿಲ್ಲ, BJP ನಾಯಕರಿಗೆ ಮಾತ್ರ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

 ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ  ಮಾತನಾಡಿದ ಅವರು ಕಾರ್ಯಕರ್ತರ  ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾರ್ಯಕರ್ತರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ಮಾಡಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. Bjpಯು  ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಆದರೆ, ಕಾಂಗ್ರೆಸ್ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.

ಚುನಾವಣೆ ದೃಷ್ಟಿಯಿಂದ GAS ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದವರು, ಮುಂದಿನ ಲೋಕಸಭಾ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ,  ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್.ಕೆ, ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್.ಎಸ್ ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article