ಮಂಗಳೂರು: ಬಸ್ ನಿರ್ವಾಹಕನಿಗೆ ತಂಡದಿಂದ ಹಲ್ಲೆ - ಅಡ್ಯಾರ್ - ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್
Wednesday, September 27, 2023
ಮಂಗಳೂರು: ತಂಗುದಾಣದಲ್ಲಿ ಬಸ್ ನಿಲ್ಲಿಸದ ಕಾರಣ ತಂಡವೊಂದು ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿತ್ತು. ಇದೀಗ ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಇಂದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಎಸ್.ಕೆ.ಟ್ರಾವೆಲ್ ಎಂಬ ಸಿಟಿ ಬಸ್ ಟೈಮಿಂಗ್ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಕಣ್ಣೂರು ಬಳಿ ನಿಗದಿತ ನಿಲ್ದಾಣದಲ್ಲಿ ನಿಲ್ಲಿಸಿರಲಿಲ್ಲ. ಆದ್ದರಿಂದ ನಿರ್ವಾಹಕ ಯಶವಂತ್ ಮೇಲೆ ಪ್ರಯಾಣಿಕನೋರ್ವನು ಹಲ್ಲೆ ನಡೆಸಿದ್ದಾನೆಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಮತ್ತೆ ಹತ್ತಾರು ಮಂದಿ ನಿರ್ವಾಹಕನನ್ನು ಬಸ್ ನಿಂದ ಎಳೆದು ಹಾಕಿ ಹಲ್ಲೆ ನಡೆಸಿದ್ದರೆಂಬ ಆರೋಪ ಕೇಳಿ ಬಂದಿತ್ತು. ಆದ್ದರಿಂದ ಗಂಭೀರವಾಗಿ ಗಾಯಗೊಂಡ ನಿರ್ವಾಹಕ ಯಶವಂತ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಎರಡೂ ಕಡೆಯವರಿಂದ ಕಂಕನಾಡಿ ನಗರ ಠಾಣೆಗೆ ದೂರು ದಾಖಲಾಗಿದೆ. ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.