-->
ಫ್ಲ್ಯಾಟ್ ನಲ್ಲಿ ಮೃತದೇಹವಾಗಿ ಗಗನಸಖಿ ಪತ್ತೆ: ಸ್ವೀಪರ್ ನನ್ನು ಬಂಧಿಸಿದ ಪೊಲೀಸರು

ಫ್ಲ್ಯಾಟ್ ನಲ್ಲಿ ಮೃತದೇಹವಾಗಿ ಗಗನಸಖಿ ಪತ್ತೆ: ಸ್ವೀಪರ್ ನನ್ನು ಬಂಧಿಸಿದ ಪೊಲೀಸರು


ಮುಂಬೈ: ತರಬೇತಿಯಲ್ಲಿದ್ದ ಗಗನಸಖಿಯ ಮೃತದೇಹ ಮುಂಬೈನ ಉಪನಗರದಲ್ಲಿರುವ ಫ್ಲಾಟ್‌ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರೂಪಲ್ ಓಗ್ರೆ (24) ಮೃತಪಟ್ಟ ದುರ್ದೈವಿ ಗಗನಸಖಿ.

ಛತ್ತೀಸ್‌ಗಢ ಮೂಲದವರಾಗಿದ್ದ ರೂಪಲ್ ಓಗ್ರೆ ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಎಪ್ರಿಲ್‌ನಲ್ಲಿ ಮುಂಬೈಗೆ ಬಂದಿದ್ದರು.‌ ಅಂಧೇರಿಯ ಮರೋಲ್ ಪ್ರದೇಶದ ಕ್ರಿಶನ್‌ಲಾಲ್ ಮರ್ವಾಹ್ ರಸ್ತೆಯಲ್ಲಿರುವ ಎನ್‌ಜಿ ಕಾಂಪ್ಲೆಕ್ಸ್‌ನ ಫ್ಲಾಟ್‌ನಲ್ಲಿ ರವಿವಾರ ತಡರಾತ್ರಿ ಆಕೆ ಮೃತದೇಹವಾಗಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಗನಸಖಿ ರೂಪಾಲ್‌ಗೆ ಆಕೆಯ ಮನೆಯವರು ಫೋನ್‌ ಕರೆ ಮಾಡಿದ್ದರು. ಆದರೆ ಆಕೆ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅನುಮಾನಗೊಂಡು ಮನೆಯವರು ಮುಂಬೈನಲ್ಲಿದ್ದ ಆಕೆಯ ಸ್ನೇಹಿತರಿಗೆ ಪರೀಕ್ಷಿಸುವಂತೆ ತಿಳಿಸಿದ್ದಾರೆ. ಆಕೆಯ ಸ್ನೇಹಿತರು ಅಲ್ಲಿಗೆ ಹೋಗಿ ನೋಡಿದಾಗ ಫ್ಲಾಟ್ ಒಳಗಿನಿಂದ ಬೀಗ ಹಾಕಿರುವುದು ಕಂಡು ಬಂದಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಫ್ಲಾಟ್‌ಗೆ ಬಂದು ನೋಡಿದಾಗ ಗಗನಸಖಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಕೆಯನ್ನು ಹತ್ತಿರದ ರಾಜವಾಡಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ತಪಾಸಣೆ ಮಾಡಿದ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೀಗ ರೂಪಲ್ ಓಗ್ರೆ ಸಾವಿಗೆ ಸಂಬಂಧಿಸಿದಂತೆ ಕಸಗುಡಿಸುವ ಕೆಲಸ ಮಾಡುತ್ತಿದ್ದ 40ರ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆತನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹೌಸಿಂಗ್ ಸೊಸೈಟಿಯಲ್ಲಿನ ಭದ್ರತಾ ಸಿಸಿಕ್ಯಾಮರಾಗಳನ್ನು  ತಪಾಸಣೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ 12 ತಂಡಗಳನ್ನು ರಚಿಸಲಾಗಿದೆ. ಸ್ವೀಪರ್‌ ವಿಕ್ರಮ್ ಅತ್ವಾಲ್ ಹಾಗೂ ಪತ್ನಿಯನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article