-->
ಬಂಟ್ಸ್ ಹಾಸ್ಟೇಲ್: ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ

ಬಂಟ್ಸ್ ಹಾಸ್ಟೇಲ್: ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ  ನಡೆದ 
ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಕಡೆಂಜ ಅಶೋಕ್ ಕುಮಾರ್ ಚೌಟ ಚಾಲನೆ ನೀಡಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ದ.ಕ. ಜಿಲ್ಲಾ ಸಂಚಾಲಕ ಬಿ.ನಾಗರಾಜ್ ಶೆಟ್ಟಿ, ಕಾಸರಗೋಡು ಜಿಲ್ಲಾ ಸಂಚಾಲಕ ಸಂಜೀವ ಶೆಟ್ಟಿ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿ.ಎ. ರಾಮ ಮೋಹನ್ ರೈ, ಸಂಜೀವ ಶೆಟ್ಟಿ ಸಂಪಿಗೆ ಅಡಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಮಿಥುನ್ ರೈ, ಸಿಎ ಶಾಂತಾರಾಮ ಶೆಟ್ಟಿ,  ವಸಂತ ಶೆಟ್ಟಿ, ಕೃಷ್ಣಪ್ರಸಾದ್ ರೈ, ಸುಧಾಕರ ಎಸ್ ಪೂಂಜ, ಬಿ ಶೇಖರ ಶೆಟ್ಟಿ, ಉಲ್ಲಾಸ್ ಶೆಟ್ಟಿ, ಭಾರತಿ ಶೆಟ್ಟಿ, ಅರುಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಆಶಾಜ್ಯೋತಿ ರೈ ವಂದಿಸಿದರು. ಭಾಗ್ಯರಾಜ್ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು. 


ಶೋಭಾಯಾತ್ರೆ
ಶೋಭಾಯಾತ್ರೆಯು ಭಜನಾ ತಂಡಗಳಿಂದ ಭಜನಾ ಸೇವೆಯೊಂದಿಗೆ  ಓಂಕಾರ ನಗರದಿಂದ ಶ್ರದ್ದಾಭಕ್ತಿಯೊಂದಿಗೆ ಹೊರಟು, ಬಂಟ್ಸ್ ಹಾಸ್ಟೇಲ್ ವೃತ್ತ ಪಿವಿಎಸ್ ಡೊಂಗರಕೇರಿ, ನ್ಯೂಚಿತ್ರಾ  ಟಾಕೀಸ್, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ರಸ್ತೆಯಾಗಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ಶ್ರೀ ದೇವರ ವಿಗ್ರಹವನ್ನು ವಿಸರ್ಜಿಸಲಾಯಿತು.

Ads on article

Advertise in articles 1

advertising articles 2

Advertise under the article