ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಒಂದೆರಡು ದಿನಗಳಲ್ಲಿ ಅದೃಷ್ಟ: ಶುಭ ಸುದ್ದಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಒಂದೆರಡು ದಿನಗಳಲ್ಲಿ ಅದೃಷ್ಟ: ಶುಭ ಸುದ್ದಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಹೇಳಿಕೆ ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಶಾಕ್ ನೀಡಿದೆ. ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರೂ. 2000/- ಜಮೆಗೊಳಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸುವ ಕಾರ್ಯ ನಡೆದಿದೆ.
ಈ ಕಾರಣಕ್ಕೆ ಹೊಸ ಫಲಾನುಭವಿಗಳ ನೋಂದಣಿ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಹಣ ಜಮೆ ಮಾಡಲು ತೊಡಕಾಗಿದೆ. ಇದನ್ನು ಶೀಘ್ರ ಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಖಜಾನೆಗೆ ಹಣ ಬಿಡುಗಡೆ ಮಾಡಲಾಗಿದ್ದು, ಒಂದು ಕೋಟಿ ಫಲಾನುಭವಿಗಳಿಗೆ ಎರಡರಿಂದ ಮೂರು ದಿನಗಳಲ್ಲಿ ಹಣ ಜಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಎರಡು ಸಾವಿರ ಹಣ ಜಮೆ ಮಾಡುವ ಪ್ರಕ್ರಿಯೆಯಲ್ಲಿ ಗೊಂದಲ ಆಗಬಾರದು ಎಂಬ ಕಾರಣಕ್ಕೆ ಯೋಜನೆಯ ಹೊಸ ನೋಂದಣಿ ಕಾರ್ಯ ಸ್ಥಗಿತಗೊಳಿಸಲಾಗಿದೆ.
ಈಗ ನೋಂದಣಿಯಾದ ಮಹಿಳೆಯರಿಗೆ ಒಂದೆರಡು ದಿನಗಳಲ್ಲಿ ಹಣ ಸಿಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.