ಮಂಗಳೂರು ಮೇಯರ್ ಆಗಿ ಸುಧೀರ್ ಶೆಟ್ಟಿ ಮತ್ತು ಉಪಮೇಯರ್ ಆಗಿ ಸುನಿತಾ ಆಯ್ಕೆ
Friday, September 8, 2023
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಯ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಉಪಮೇಯರ್ ಆಗಿ ಬಿಜೆಪಿ ಯ ಸುನಿತಾ ಆಯ್ಕೆಯಾದರು.
ಮಂಗಳೂರು ಮಹಾನಗರ ಪಾಲಿಕೆ ಯ ಮಂಗಳಾ ಸಭಾಂಗಣದಲ್ಲಿ ನಡೆದ ಚುನಾವಣೆಯನ್ನು ಚುನಾವಣಾಧಿಕಾರಿ ಡಾ ಜಿ ಸಿ ಪ್ರಕಾಶ್ ಚುನಾವಣೆ ನಡೆಸಿ ಕೊಟ್ಟರು. ಈ ಅವಧಿಯ 4ನೇ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.
ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44 ಸದಸ್ಯರು,ಕಾಂಗ್ರೆಸ್
14 ಸದಾಎ ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಇದ್ದು, ಕೊಡಿಯಾಲ್‌ಬೈಲ್ ವಾರ್ಡ್ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಅವರು ಮೇಯರ್ ಹುದ್ದೆಗೆ ಬಹುಮತದಿಂದ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿರುವ ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಂಬೂರು ವಾರ್ಡ್ ಸುನೀತಾ ಅವರು ಉಪಮೇಯರ್ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಸುಧೀರ್ ಶೆಟ್ಟಿ ಪರ 47 ಮತ, ವಿರುದ್ಧ 14 ಮತ ಬಿದ್ದರೆ ಮತ್ತು ಇಬ್ಬರು ತಟಸ್ಥ ರಾಗಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ನವೀನ್ ಆರ್ ಡಿಸೋಜ ಪರ 14 ಮತ, ವಿರುದ್ಧ 47 ಮತ ಬಿದ್ದರೆ ಇಬ್ಬರು ತಟಸ್ಥ ರಾಗಿದ್ದರು
ಸುಧೀರ್ ಶೆಟ್ಟಿ ಅವರು 3 ನೇ ಬಾರಿಗೆ ಮಂಗಳೂರು ಮಹಾನಗರ ಪಾಲಿಕೆಗೆ ಆಯ್ಕೆಯಾದವರು. ಮುಖ್ಯ ಸಮಿತಿ ಸಚೇತಕರಾಗಿ, ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಚುನಾವಣೆಯಲ್ಲಿ ಬಿಜೆಪಿ ಪರ ಮತ ಚಲಾಯಿಸಿದರು.