-->
ಮಂಗಳೂರು: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಖದೀಮರು ಸಿಸಿಬಿ ಬಲೆಗೆ

ಮಂಗಳೂರು: ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಖದೀಮರು ಸಿಸಿಬಿ ಬಲೆಗೆ

ಮಂಗಳೂರು: ನಗರದ ಅಡ್ಯಾರ್ ನಲ್ಲಿ ಜಾನುವಾರು ಅಕ್ರಮ ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್(34), ಹೈದರಾಲಿ ಬಂಧಿತ ಆರೋಪಿಗಳು.

ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಚಾರದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಇದು ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಇದೇ ವಿಚಾರದಲ್ಲಿ ಇತ್ತಂಡಗಳ ನಡುವೆ ಆಗಾಗ್ಗೆ ವಾಗ್ವಾಗಳು ನಡೆಯುತ್ತಿತ್ತು. ಆದ್ದರಿಂದ ತಸ್ಲೀಮ್ ಹಾಗೂ ಆತನ ಸಹಚರರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿತ್ತು. ಅದಕ್ಕಾಗಿ ತಲವಾರುಗಳೊಂದಿಗೆ ಹೊಂಚು ಹಾಕುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಕೊಲೆ ಸಂಚನ್ನು ವಿಫಲಗೊಳಿಸಿದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಬಂಧಿತರಿಂದ ಎರಡು ತಲವಾರುಗಳು, ಒಂದು ಚೂರಿ, ಎರಡು ಮೊಬೈಲ್ ಫೋನ್ ಗಳು, ಮಹೇಂದ್ರ ಪಿಕ್ ಅಪ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 5,21,000 ರೂ. ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ತಸ್ಲೀಮ್ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ಸುಮಾರು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು. ಮತ್ತೋರ್ವ ಆರೋಪಿ ಹೈದರಾಲಿ ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. 




Ads on article

Advertise in articles 1

advertising articles 2

Advertise under the article