ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ - ಕಳೆದೊಂದು ವರ್ಷದಿಂದ ವಿದ್ಯಾರ್ಥಿಯ ಕಾಮದಾಟ
Friday, September 1, 2023
ಸಾಗರ: ಪಿಯು ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಿದ್ದ ವಿಚಾರ ಬಹಿರಂಗವಾದ ಘಟನೆ ಮಂಗಳವಾರ ನಡೆದಿದೆ.
ಸೊರಬದಲ್ಲಿ ವ್ಯಾಸಂಗ ಮಾಡುತ್ತಿರುವ 22 ವರ್ಷದ ವಿದ್ಯಾರ್ಥಿ ಸಾಗರದಲ್ಲಿ ಪಿಯು ಓದುತ್ತಿರುವ ವಿದ್ಯಾರ್ಥಿನಿಯ ಸ್ನೇಹ ಬೆಳೆಸಿದ್ದ. ಬಳಿಕ ಆಕೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಂದು ಒಂದು ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಎಸಗುತ್ತಿದ್ದ. ಇದರಿಂದ ಆಕೆ ಗರ್ಭ ಧರಿಸಿದ್ದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಎರಡು ಮೂರು ದಿನದ ಹಿಂದೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಪ್ರಾಪ್ತೆಯನ್ನು ಪೋಷಕರು ಚಿಕಿತ್ಸೆಗೆ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆಗ ಆಕೆ ಗರ್ಭವತಿಯಾಗಿರುವುದು ತಿಳಿದು ಬಂದಿದೆ. ಬಳಿಕ ಆಕೆ ಸಾಗರದ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬುಧವಾರ ಬಂಧಿಸಿ, ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.