ಮಂಗಳೂರು ವಿವಿಯಲ್ಲಿ ಗಣೇಶೋತ್ಸವಕ್ಕೆ ಅಡ್ಡಿಯಿಲ್ಲ: ಕುಲಪತಿ
Wednesday, September 6, 2023
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಕುಲಪತಿಯವರಿಂದ ವಿರೋಧವಿದೆ ಎಂದು ಕಳೆದ ಕೆಲವು ದಿನಗಳಿಂದ ಮಾಧ್ಯಮದಲ್ಲಿ ವರದಿಯಾಗುತ್ತಿರುವ ವಿಚಾರ ಸತ್ಯಕ್ಕೆ ದೂರವಾದುದು ಹಾಗೂ ವಿಷಾದನೀಯ ಎಂದು ಕುಲಪತಿಗಳ ಪ್ರಕಟನೆ ತಿಳಿಸಿದೆ.
ವಿಶ್ವವಿದ್ಯಾನಿಲಯದ ಆವರಣದಲ್ಲಿ ಗಣೇಶೋತ್ಸವ ನಡೆಸಲು ಯಾವುದೇ ನಿರಾಕರಣೆ/ವಿರೋಧ ಇರುವುದಿಲ್ಲ. ಈ ಹಿಂದಿನಂತೆಯೇ ಈ ವರ್ಷವೂ ವಿವಿಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತದೆ ಎಂದು ಕುಲಪತಿಗಳ ಪ್ರಕಟಣೆ ತಿಳಿಸಿದೆ.