-->
ಅ.12ರಂದು ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ರವಾನೆಯಾಗಲಿದೆ ಎಮರ್ಜೆನ್ಸಿ ಅಲರ್ಟ್ ಸೌಂಡ್: ಓಕೆ ಅನ್ನುವವರೆಗೆ ಬೀಪ್ ಸದ್ದು ಇರಲಿದೆ ಭಯ ಬೇಡ

ಅ.12ರಂದು ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ರವಾನೆಯಾಗಲಿದೆ ಎಮರ್ಜೆನ್ಸಿ ಅಲರ್ಟ್ ಸೌಂಡ್: ಓಕೆ ಅನ್ನುವವರೆಗೆ ಬೀಪ್ ಸದ್ದು ಇರಲಿದೆ ಭಯ ಬೇಡ


ಬೆಂಗಳೂರು: ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿ ಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿಭಿನ್ನ ಧ್ವನಿ ಮತ್ತು ಕಂಪನ ಸಕಾಲಿಕ ಮುನ್ನೆಚ್ಚರಿಕೆ ನೀಡಲು ಮುಂದಾಗಿದೆ. ಅದರ ಅಂಗವಾಗಿ ರಾಜ್ಯದಲ್ಲಿ ಅ.12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ನಡೆಯಲಿದೆ. 

ಇದು ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ - ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್ ಬಳಕೆದಾರರಿಗೆ ಈ ಫ್ಲಾಶ್ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.

ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

Ads on article

Advertise in articles 1

advertising articles 2

Advertise under the article