ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯೇರಿಕೆ ಶಾಕ್: 209 ರೂ. ಹೆಚ್ಚಳ
Sunday, October 1, 2023
ಹೊಸದಿಲ್ಲಿ: ಅಕ್ಟೋಬರ್ ತಿಂಗಳು ಪ್ರಾರಂಭದಲ್ಲಿಯೇ ತೈಲ ಕಂಪೆನಿಗಳು ಗ್ರಾಹಕರಿಗೆ ಬೆಲೆಯೇರಿಕೆಯ ಶಾಕ್ ನೀಡಿದೆ. ಇಂದಿನಿಂದ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯು 209 ರೂ. ಏರಿಕೆಯಾಗಿದೆ.
ತೈಲ ಮಾರುಕಟ್ಟೆ ಕಂಪೆನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದೆ. ಇದರ ಪರಿಣಾಮ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆಯಾಗಿದೆ.
209 ರೂಪಾಯಿಗಳ ಹೆಚ್ಚಳದ ಬಳಿಕ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ. ಆಗಲಿದೆ ಎಂದು ಹೇಳಲಾಗಿದೆ.