ಬಂಟ್ವಾಳ - ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಯುವತಿಗೆ ಕಾರು ಢಿಕ್ಕಿ- ಮೃತ್ಯು
Thursday, October 12, 2023
ಮಂಗಳೂರು : ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಯುವತಿ ಗೆ ಕಾರು ಢಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಬಂಟ್ಬಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (23) ಸಾವನ್ನಪ್ಪಿದ ಯುವತಿ.
ಈಕೆ ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕೆಲಸ ಬಿಟ್ಟು ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.