-->
ಐಟಿ ದಾಳಿ: ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆ

ಐಟಿ ದಾಳಿ: ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆ

ಬೆಂಗಳೂರು: ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್ ಮಾಲಕರು ಹಾಗೂ ಮಾಜಿ ಕಾರ್ಪೊರೇಟರ್‌ಗಳ ಮನೆಗಳ ಮೇಲೆ ನಿನ್ನೆ ತಡರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಜಿ ಕಾರ್ಪೊರೇಟರ್ ಸಂಬಂಧಿಯೊಬ್ಬರ ಫ್ಲ್ಯಾಟ್‌ನಲ್ಲಿ 42 ಕೋಟಿ ರೂ. ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. 

ಮಾಜಿ ಶಾಸಕರೊಬ್ಬರ ಸಂಬಂಧಿ ಎಂದು ಹೇಳಲಾಗುತ್ತಿರುವ ಮಾಜಿ ಮಹಿಳಾ ಕಾರ್ಪೊರೇಟರ್ ಸಂಬಂಧಿಕರ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇನ್ನು ಮಾಜಿ ಮಹಿಳಾ ಕಾರ್ಪೋರೇಟರ್ ಪತಿಯವರ ಸಹೋದರನಿಗೆ ಸೇರಿದ ಆರ್‌ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ಸದ್ಯ ಹಣ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. 

ಫ್ಲ್ಯಾಟ್‌ನಲ್ಲಿ ದೊರೆತಿರುವ 42 ಕೋಟಿ ರೂಪಾಯಿ ಆದಾಯ ತೆರಿಗೆ ಅಧಿಕಾರಿಗಳು ಮಾಜಿ ಕಾರ್ಪೊರೇಟರ್ ಸಂಬಂಧಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಕಾರ್ಪೊರೇಟರ್‌ಗೆ ಸಂಬಂಧಿಸಿದ ವ್ಯವಹಾರ, ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮಾಜಿ ಕಾರ್ಪೋರೇಟರ್ ಸಂಬಂಧ ಗುತ್ತಿಗೆದಾರರಾಗಿದ್ದು, ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ 42 ಕೋಟಿ ರೂಪಾಯಿ ಹಣವನ್ನ ಐಟಿ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ.

ಚುನಾವಣೆಗೆ ವ್ಯಯ ಮಾಡಲು ಈ ಹಣ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿಯ ಮೇರೆಗೆ ನಿನ್ನೆಯಿಂದ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸೆನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲನಿ, ಸದಾಶಿವನಗರ, ಮತ್ತಿಕೇರಿ ಸೇರಿದಂತೆ ಹತ್ತಾರು ಕಡೆಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ವಾರ ಕೂಡ ತೆರಿಗೆ ವಂಚನೆ ಆರೋಪದ ಮೇಲೆ ಜ್ಯುವೆಲರಿ ಉದ್ಯಮಿಗಳ ಮೇಲೆ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಕಳೆದ ಬಾರಿ ಸಿಕ್ಕ ದಾಖಲಾತಿಗಳ ಆಧರಿಸಿ ನಿನ್ನೆ ದಾಳಿ ಮಾಡಲಾಗಿತ್ತು.

Ads on article

Advertise in articles 1

advertising articles 2

Advertise under the article