ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಶುಭ ಮುಹೂರ್ತ ನಿಗದಿ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ 2024ರ ಜನವರಿ 22 ರಂದು ನಡೆಯಲಿದೆ. ಅಂದು ಮಧ್ಯಾಹ್ನ 12.30ಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಪ್ರಧಾನಿ ಮೋದಿಯವರು ಕೂಡ ಉಪಸ್ಥಿತರಿರಲಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿಕೊಡುವಂತೆ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂದಿರದ ಟ್ರಸ್ಟ್ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್, ವಿಶ್ವಸ್ಥರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಈ ವೇಳೆ ಉಪಸ್ಥಿತರಿದ್ದರು.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಹಿರಿಯರ ಭೇಟಿಯ ಬಳಿಕ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿಯವರು, ನಾನು ಆಶೀರ್ವಾದ ಪಡೆದಿದ್ದೇನೆ ಮತ್ತು ಅಂತಹ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ ಎಕ್ಸ್(ಟ್ವೀಟ್) ಮೂಲಕ ತಿಳಿಸಿದ್ದಾರೆ.
“ಜೈ ಶ್ರೀ ರಾಮ್! ಇಂದು ಭಾವನೆಗಳು ತುಂಬಿದ ದಿನ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧಿಕಾರಿಗಳು ನನ್ನನ್ನು ಭೇಟಿ ಮಾಡಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದ ಶಂಕುಸ್ಥಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರಲು ನನ್ನನ್ನು ಆಹ್ವಾನಿಸಿದ್ದರು. ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವನದಲ್ಲಿ ನಾನು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ, ”ಎಂದು ಪಿಎಂ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಸಾವಿರಾರು ಮಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.