ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಯುವತಿ ಕಾರ್ಕಳದಲ್ಲಿ ನೇಣಿಗೆ ಶರಣು
Tuesday, October 17, 2023
ಕಾರ್ಕಳ: ಇಲ್ಲಿನ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆ ನಿವಾಸಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಚಾರ್ವಿ ಸೋಮವಾರ ಮನೆಯಲ್ಲೇ ಇದ್ದರು. ಆದರೆ ಯಾವುದೋ ಕಾರಣಕ್ಕೆ ಸಂಜೆ ವೇಳೆಗೆ ನೇಣಿಗೆ ಶರಣಾಗಿದ್ದಾರೆ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಚಾರ್ವಿ ಕೆಲವು ತಿಂಗಳಿನಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.