ಮಂಗಳೂರು: ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಸಿಸಿಬಿ
Friday, October 20, 2023
ಮಂಗಳೂರು: ನಗರದ ಉಳ್ಳಾಲದ ದೇರಳಕಟ್ಟೆ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕಿನ ತೌಡುಗೋಳಿಯ
ಅಬ್ದುಲ್ ಅಜೀಜ್ (42) ಬಂಧಿತ ಆರೋಪಿ.
ಈತ ಹಲವು ಮಾದಕವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 26 ಗ್ರಾಂ ತೂಕದ 1,30,000 ರೂ. ಮೌಲ್ಯದ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಎರಡು ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,41,500 ರೂ. ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈತನ ವಿರುದ್ಧ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.